Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:10 - ಕನ್ನಡ ಸತ್ಯವೇದವು C.L. Bible (BSI)

10 ಅವರ ಕಣ್ಣು ಕುರುಡಾಗಲಿ ನಿರಂತರ ಭಾರದಿಂದ ಬೆನ್ನು ಗೂನಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು ಎಂದು ದಾವೀದನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರ ಕಣ್ಣು ಕುರುಡಾಗಲಿ; ನಿರಂತರ ಭಾರದಿಂದ ಬೆನ್ನು ಗೂನಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಂಕಾ ದಿಸುಚೆ ನ್ಹಯ್, ತಸೆ ತೆಂಚೆ ಡೊಳೆ ಕುಡ್ಡೆ ಹೊಂವ್ದಿತ್, ಅನಿ ಕನ್ನಾಬಿ ತೆಂಕಾ ತರಾಸಾಂಚ್ಯಾ ಬುಡಿ ವ್ಹಾಕುನ್ ರ್‍ಹಾಯ್ ಸರ್ಕೆ ಕರ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:10
13 ತಿಳಿವುಗಳ ಹೋಲಿಕೆ  

ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


“ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು