ರೋಮಾಪುರದವರಿಗೆ 11:20 - ಕನ್ನಡ ಸತ್ಯವೇದವು C.L. Bible (BSI)20 ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆ ಖರೆ ತೆನಿ ವಿಶ್ವಾಸ್ ಕರುಕ್‍ನ್ಯಾತ್ ತೆಚೆಸಾಟ್ನಿ ತೆಂಕಾ ಕಾತ್ರುನ್ ಟಾಕುನ್ ಹೊಲ್ಲೆ , ತಿಯಾ ತ್ಯಾ ಜಾಗ್ಯಾರ್ ಹಾಸ್ ಕಶ್ಯಾಕ್ ತಿಯಾ ವಿಶ್ವಾಸ್ ಕರ್‍ಲೆಯ್ ಗರುಕಿ ಕರುನ್ ದಾಕ್ವುನಕ್ಕೊ; ತೆಚ್ಯಾ ಬದ್ಲಾಕ್ ತುಕಾ ಭಿಂಯೆ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |