Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:23 - ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರು ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ದೇವರು ಅವರನ್ನು ತಿರಿಗಿ ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಜುದೆವಾನಿ ಅಪ್ನಾಚೆ ವಿಶ್ವಾಸಾನ್‍ ನಸಲ್ಲೆ ಜಿವನ್ ಸೊಡುನ್ ಸೊಡ್ಲ್ಯಾನಿ ತರ್ ತೆಂಕಾ ತೊ ಅದ್ದಿಚ್ಯಾ ಜಾಗ್ಯಾಕ್ ಫಾಟಿ ನ್ಹೆವ್ನ್ ಥವ್ತಾ. ಕಶ್ಯಾಕ್ ಮಟ್ಲ್ಯಾರ್, ತೆಂಕಾ ಅನಿ ಪರ್‍ತುನ್ ತೆಂಚ್ಯಾ ಜಾಗ್ಯಾರ್ ಕಶಿ ಕರುಕ್ ದೆವಾಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:23
6 ತಿಳಿವುಗಳ ಹೋಲಿಕೆ  

‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”


ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.


ನೀನು ಕಾಡು ಓಲಿವ್ ಮರದಿಂದ ಕಡಿದ ರೆಂಬೆ. ಉತ್ತಮ ತಳಿಯ ಓಲಿವ್ ಮರಕ್ಕೆ ಕೃತಕವಾಗಿ ಕಸಿಕಟ್ಟಲಾಗಿರುವೆ. ಇಸ್ರಯೇಲರಾದರೋ ಉತ್ತಮ ತಳಿಯ ಓಲಿವ್ ಮರದಲ್ಲೇ ಹುಟ್ಟಿ ಬೆಳೆದ ರೆಂಬೆಗಳು. ಅದೇ ಮರದಲ್ಲಿ ಹುಟ್ಟಿ ಬೆಳೆದ ರೆಂಬೆಗಳನ್ನು ಕಡಿದು ಮತ್ತೆ ಅದಕ್ಕೆ ಕಸಿಕಟ್ಟುವುದು ಎಷ್ಟೋ ಸುಲಭವಲ್ಲವೆ?


ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು