Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:26 - ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಶೆ ಸಗ್ಳೆ ಇಸ್ರಾಯೆಲ್ ಬಚಾವ್ ಹೊತಾ. ಪವಿತ್ರ್ ಪುಸ್ತಕ್ ಮನ್ತಾ, “ಸುಟ್ಕಾದಿನಾರೊ ಸಿಯೊನಾತ್ನಾ ಯೆತಾ ಅನಿ ಜಾಕೊಬಾಚ್ಯಾ ಘರಾನ್ಯಾತ್ಲೆ ಸಗ್ಳೆ ಬುರ್ಶೆಪಾನ್ ಕಾಡುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:26
25 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು