Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:36 - ಕನ್ನಡ ಸತ್ಯವೇದವು C.L. Bible (BSI)

36 ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಕಶ್ಯಾಕ್ ಮಟ್ಲ್ಯಾರ್ ಸಗ್ಳೆ ತೆಚ್ಯಾ ವೈನಾತ್ ರಚುನ್ ಹೊಲಾ, ಅನಿ ಸಗ್ಳೆ ತೆಚೆ ವೈನಾಚ್ ಅನಿ ತೆಚೆಸಾಟ್ನಿಚ್ ಅಕೆರ್ ಹೊತಾ. ದೆವಾಕ್ ಸದಾ ಸರ್ವತಾಕ್ ಮಹಿಮಾ ಹೊಂವ್ದಿತ್! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:36
40 ತಿಳಿವುಗಳ ಹೋಲಿಕೆ  

ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಏಕೆಂದರೆ ಸ್ತ್ರೀ ಪುರುಷನಿಂದ ಉತ್ಪತ್ತಿಯಾದಂತೆ ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಸಮಸ್ತವೂ ದೇವರಿಂದ ಹುಟ್ಟುತ್ತದೆ.


ಅವರ ಆಳ್ವಿಕೆ ಯುಗಯುಗಾಂತರಕ್ಕೂ ಇರಲಿ. ಆಮೆನ್.


ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!


ದೇವರಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ! ಆಮೆನ್.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.


ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಸರ್ವೇಶ್ವರನ ಮಹಿಮೆಯನು ಹೊಗಳಲಿ ಆತನ ಸ್ತೋತ್ರವ ಪಸರಿಸಲಿ ದ್ವೀಪದ್ವೀಪಗಳಲಿ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು