Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:5 - ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರಂತೆ ಈಗಿನ ಕಾಲದಲ್ಲಿಯೂ ದೇವರು ಕೃಪೆಯಿಂದ ಆದುಕೊಂಡವರಾದ ಕೆಲವರು ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅತ್ತಾಬಿ ತಸೆಚ್ ಹಾಯ್: ದೆವಾನ್ ಅಪ್ನಾಚ್ಯಾ ಕುರ್ಪೆನ್ ಎಚುನ್ ಕಾಡಲ್ಲ್ಯಾನಿತ್ಲಿ ಕಮಿ ಲೊಕಾ ಹುರಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:5
7 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು