Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:6 - ಕನ್ನಡ ಸತ್ಯವೇದವು C.L. Bible (BSI)

6 ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೃಪೆಯಿಂದ ಆದುಕೊಂಡನು ಅಂದ ಮೇಲೆ ಪುಣ್ಯಕ್ರಿಯೆಗಳ ಕಾರಣದಿಂದ ಆದುಕೊಳ್ಳಲಿಲ್ಲವಷ್ಟೆ; ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವದಕ್ಕಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ಎಚುನ್ ಕಾಡ್ತಲೆ ತೆಚ್ಯಾ ಕುರ್ಪೆಚ್ಯಾ ವರ್‍ತಿ ಹೊಂದುನ್ ಹಾಯ್, ತ್ಯಾ ಲೊಕಾನಿ ಕರಲ್ಲ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ನಾ. ಕಶ್ಯಾಕ್ ಮಟ್ಲ್ಯಾರ್, ಜರ್‍ತರ್ ದೆವ್ ಲೊಕಾಚ್ಯಾ ಕಾಮಾಂಚ್ಯಾ ವೈನಾ ಎಚುನ್ ಕಾಡ್ತಾ ಮನುನ್ ಹೊಲ್ಯಾರ್ ತೆಚಿ ಕುರ್ಪಾ ಖರಿ ಕುರ್ಪಾ ಹೊವ್ನ್ ರ್‍ಹಾಯ್ ನಸಿಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:6
11 ತಿಳಿವುಗಳ ಹೋಲಿಕೆ  

ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು