Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:7 - ಕನ್ನಡ ಸತ್ಯವೇದವು C.L. Bible (BSI)

7 ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಜಾಲ್ಯಾರ್ ಕಾಯ್? ಇಸ್ರಾಯೆಲಾಚ್ಯಾ ಲೊಕಾಕ್ನಿ ತೆನಿ ಕಾಯ್ ಹುಡ್ಕುಕ್ ಲಾಗಲ್ಲ್ಯಾನಿ ತೆ ಗಾವುಕ್‍ ನಾ. ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಉಲ್ಲ್ಯಾಶ್ಯಾ ತಾಂಡ್ಯಾಕ್ ತೆ ಸಗ್ಳೆ ಗಾವ್ಲೆ; ಅನಿ ಹುರಲ್ಲೆ ದೆವಾಚ್ಯಾ ಬಲ್ವನಿಕ್ ಆಯ್ಕಿನಸ್ತಾನಾ ರ್‍ಹಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:7
25 ತಿಳಿವುಗಳ ಹೋಲಿಕೆ  

ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.


ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು