Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:16 - ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸಗ್ಳ್ಯಾಂಚ್ಯಾ ವಾಂಗ್ಡಾ ಎಕುಚ್ ರಿತಿನ್ ಚಲಾ. ತುಮಿ ಗರುಕಿ ಕರುಚೆ ನ್ಹಯ್, ಸಗ್ಳ್ಯಾಂಚ್ಯಾ ವಾಂಗ್ಡಾ ಎಕ್ ಮನಾಚೆ ಹೊವ್ನ್ ರ್‍ಹಾವಾ. ತುಮಿಚ್ ಶಾನೆ ಮನುನ್ ಚಿಂತುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:16
48 ತಿಳಿವುಗಳ ಹೋಲಿಕೆ  

ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಯುವೋದ್ಯಳು ಮತ್ತು ಸಂತುಕೆ ಇವರಲ್ಲಿ ನನ್ನದೊಂದು ಬಿನ್ನಹ: ನಿಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪ್ರಭುವಿನಲ್ಲಿ ಒಂದಾಗಿ ಬಾಳಿರಿ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.


ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು