Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:17 - ಕನ್ನಡ ಸತ್ಯವೇದವು C.L. Bible (BSI)

17 ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕೊನ್‍ಬಿ ತುಮ್ಕಾ ವಾಯ್ಟ್ ಕರ್ಲ್ಯಾರ್, ತುಮಿಬಿ ತೆಂಕಾ ವಾಯ್ಟುಚ್ ಕರುನಕಾಶಿ. ಸಗ್ಳ್ಯಾ ಲೊಕಾಂಚ್ಯಾ ನದ್ರೆತ್ ಬರೆ ದಿಸ್ತಾ ತೆಚ್ ಕರುಕ್ ಖಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:17
22 ತಿಳಿವುಗಳ ಹೋಲಿಕೆ  

“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ನಿನಗೆ ರುಚಿಕರವಾದದ್ದು ಪರರಿಗೆ ದೂಷಣಾಸ್ಪದವಾಗದಿರಲಿ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ಇದಾದ ಬಳಿಕ ಜೋಸೆಫನು ತನ್ನ ಆಳುಗಳಿಗೆ, “ಆ ಜನರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ಅದರಲ್ಲಿ ಇಟ್ಟುಬಿಡಿ. ಅವರ ಪ್ರಯಾಣಕ್ಕೆ ಬೇಕಾದ ಅಹಾರವನ್ನು ಕೊಟ್ಟು ಕಳಿಸಿರಿ,” ಎಂದು ಅಪ್ಪಣೆ ಮಾಡಿದ. ಆಳುಗಳು ಅದರಂತೆಯೆ ಮಾಡಿದರು.


ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.


“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆ, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆ” ಎನ್ನಬೇಡ.


ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”


ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು