ರೋಮಾಪುರದವರಿಗೆ 12:2 - ಕನ್ನಡ ಸತ್ಯವೇದವು C.L. Bible (BSI)2 ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ. ಅಧ್ಯಾಯವನ್ನು ನೋಡಿ |