Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:5 - ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗೆಯೇ ನಾವೆಲ್ಲರು ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ಪರಸ್ಪರ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ಆ ದೇಹದ ಅಂಗಗಳಾಗಿದ್ದೇವೆ. ಆ ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆಚ್ ಅಮಿ ಲೈ ಜಾನಾ ರ್‍ಹಾಲ್ಯಾರ್‍ಬಿ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಮಿ ಎಕ್ ಆಂಗ್ ಹೊವ್ನ್ ಹಾಂವ್, ಅನಿ ಅಮಿ ಎಕ್ ಆಂಗಾಚೆ ದುಸ್ರಿ-ದುಸ್ರಿ ಭಾಗಾ ರ್‍ಹಾಲ್ಯಾ ಸರ್ಕೆ ಎಕಾಕ್ಡೆ ಮಿಳಲ್ಲೆ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:5
15 ತಿಳಿವುಗಳ ಹೋಲಿಕೆ  

ಹೀಗೆ ಅಂಗಗಳು ಅನೇಕವಾಗಿದ್ದರೂ ದೇಹ ಮಾತ್ರ ಏಕ.


ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ನಮಗಿರುವುದು ಒಂದೇ ದೇಹ. ಆದರೂ ಅದರಲ್ಲಿ ಅನೇಕ ಅಂಗಗಳಿವೆ. ಈ ಅಂಗಗಳೆಲ್ಲವೂ ತಮ್ಮದೇ ಆದ ನಿರ್ದಿಷ್ಟಕಾರ್ಯವನ್ನು ನಿರ್ವಹಿಸುತ್ತವೆ.


ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು