Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:11 - ಕನ್ನಡ ಸತ್ಯವೇದವು C.L. Bible (BSI)

11 ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೆ ಸಗ್ಳೆ ಬಗ್ತಾನಾ, ಅಮಿ ಖಲ್ಯಾ ಎಳಾರ್ ಯೆವ್ನ್ ಪಾವ್ಲಾ ಮನ್ತಲೆ ಕಳ್ವುನ್ ಘೆವಾ, ಅಮಿ ನಿಜೆತ್ಲೊ ಉಟ್ತಲೊ ಎಳ್ ಯೆವ್ನ್ ಪಾವ್ಲೊ, ಅಮ್ಚಿ ಸುಟ್ಕಾ ಅಮಿ ವಿಶ್ವಾಸ್ ಕರುಕ್ ಚಾಲು ಕರಲ್ಲಾಂವ್ ತ್ಯಾ ಎಳಾರ್ ಹೊತ್ತಿ ತ್ಯೆಂಚ್ಯಾನಿಕಿ ಲೈ ಜಗ್ಗೊಳ್ ಯೆವ್ನ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:11
25 ತಿಳಿವುಗಳ ಹೋಲಿಕೆ  

ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.


ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು