Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:12 - ಕನ್ನಡ ಸತ್ಯವೇದವು C.L. Bible (BSI)

12 ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ರಾತ್ ಸರುನ್ಗೆತ್ ಯೆಲಿ, ದಿಸ್ ಉಜ್ವಾಡುನ್ಗೆತ್ ಯೆಲೊ, ತಸೆಮನುನ್ ಅಮಿ ಕಾಳೊಕಾಕ್ ಸಮಂದ್ ಪಡಲ್ಲಿ ಕಾಮಾ ಕರ್‍ತಲೆ ಸೊಡುನ್ ಸೊಡುಂವಾ, ಅನಿ ಉಜ್ವೊಡಾತ್ ಲಡಾಯಿಕ್ ನೆಸ್ತಲಿ ಕವಚಾ ಅಮಿ ನೆಸುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:12
30 ತಿಳಿವುಗಳ ಹೋಲಿಕೆ  

ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.


ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು