Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:13 - ಕನ್ನಡ ಸತ್ಯವೇದವು C.L. Bible (BSI)

13 ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮ್ಚಿ ಚಾಲ್, ಅನಿ ಅಮ್ಚಿ ಚಲ್ನುಕ್ ದಿಸಾಚ್ಯಾ ಉಜ್ವೊಡಾತ್ ಜಿವನ್ ಕರ್‍ತಲ್ಯಾ ಲೊಕಾಂಚ್ಯಾ ಸರ್ಕೆ ಹೊವ್ನ್ ರ್‍ಹಾವ್ಕ್ ಪಾಜೆ, ಪೊಜ್ಡೆಪಾನ್; ನಾಹೊಲ್ಯಾರ್ ಫಿದೊಡೆಪಾನ್, ನಸ್ತೆಪಾನ್ ನಾಹೊಲ್ಯಾರ್ ಬುರ್ಶಿಚಾಲ್, ಝಗ್ಡೆ ನಾಹೊಲ್ಯಾರ್ ಅನಿ ಎಕ್ಲ್ಯಾಚೆ ಬಗುನ್ ಜಳ್ತಲೆ, ಅಮ್ಕಾ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:13
42 ತಿಳಿವುಗಳ ಹೋಲಿಕೆ  

ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು