Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:4 - ಕನ್ನಡ ಸತ್ಯವೇದವು C.L. Bible (BSI)

4 ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಆ ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್ ಸಗ್ಳೆ ಅದಿಕಾರಿ ತುಮ್ಚ್ಯಾ ಬರೆಪಾನಾ ಸಾಟ್ನಿಚ್ ಕಾಮಾ ಕರುಲ್ಯಾತ್. ತೆನಿ ದೆವಾಚೆ ಸೆವಕ್ ಹೊವ್ನ್ ಹಾತ್. ಖರೆ ತುಮಿ ವಾಯ್ಟ್ ಕರ್ಲ್ಯಾಶಿ ತರ್ ತನ್ನಾ ತೆಕಾ ಭಿಂವ್ಚೆ ಪಡ್ತಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಶಿಕ್ಷಾ ಲಾವ್ತಲೊ ಅದಿಕಾರ್ ಖರೆಚ್ ದಿಲ್ಲೊ ಹಾಯ್, ತೆನಿ ದೆವಾಚಿ ಸೆವಕಾ ತಸೆಮನುನ್ ವಾಯ್ಟ್ ಕರ್‍ತಲ್ಯಾಕ್ನಿ ದೆವಾಚಿ ಶಿಕ್ಷಾ ತೆನಿ ದಿವ್ನುಚ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:4
23 ತಿಳಿವುಗಳ ಹೋಲಿಕೆ  

ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.


ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಇಸ್ರಯೇಲರೆಲ್ಲರಿಗೂ ಹಾಗೂ ಅವರ ನಡುವೆ ವಾಸಮಾಡುತ್ತಿದ್ದ ಹೊರನಾಡಿನವರಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಅಕಸ್ಮಾತ್ತಾಗಿ ಬೇರೊಬ್ಬನನ್ನು ಕೊಂದವನು ಓಡಿಹೋಗಿ ಹತನಾದವನ ಹತ್ತಿರ ಬಂಧುವಿನಿಂದ ತಲೆ ತಪ್ಪಿಸಿಕೊಳ್ಳಬಹುದಿತ್ತು. ನ್ಯಾಯ ಸಭೆಯ ಮುಂದೆ ನಿಲ್ಲುವ ತನಕ ಅಲ್ಲೇ ಇರಬಹುದಿತ್ತು.


ಹತನಾದವನ ಹತ್ತಿರದ ಬಂಧು, ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ, ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಕೊಂದದ್ದು ಅಕಸ್ಮಾತ್ತಾಗಿ, ಹಳೆಯ ದ್ವೇಷದಿಂದೇನೂ ಅಲ್ಲ.


ದುಷ್ಟರನ್ನು ಶಿಕ್ಷಿಸುವುದಕ್ಕೂ ಶಿಷ್ಟರನ್ನು ಪ್ರಶಂಸಿಸುವುದಕ್ಕೂ ಆತನಿಂದ ನೇಮಿತವಾಗಿರುವ ರಾಜ್ಯಪಾಲರಿಗೂ ಅಧೀನರಾಗಿ ಬಾಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು