Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:13 - ಕನ್ನಡ ಸತ್ಯವೇದವು C.L. Bible (BSI)

13 ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಸೆ ರ್‍ಹಾತಾನಾ ಅಮಿ ಹ್ಯಾನ್ ಫಿಡೆ ಎಕಾಮೆಕಾಚಿ ಝಡ್ತಿ ಕರ್‍ತಲೆ ಸೊಡುನ್ ಸೊಡುಚೆ, ಹೆಚ್ಯಾ ಬದ್ಲಾಕ್ ತುಮಿ ಕನ್ನಾಬಿ ಅನಿ ಎಕ್ಲ್ಯಾಕ್ ಅಡ್ಕಳ್ ನಾಹೊಲ್ಯಾರ್ ಪಾಪಾತ್ ಪಡುಕ್ ಕಾರನ್ ಹೊವ್ಚೆ ನ್ಹಯ್ ಮನ್ತಲೊ ನಿರ್‍ದಾರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:13
26 ತಿಳಿವುಗಳ ಹೋಲಿಕೆ  

ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


“ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?


“ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?


ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.


ಸ್ತ್ರೀ ಮುಸುಕಿಲ್ಲದೆ ದೇವರನ್ನು ಪ್ರಾರ್ಥಿಸುವುದು ಲಕ್ಷಣವೇ? ನೀವೇ ತೀರ್ಮಾನಿಸಿರಿ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


“ಅವರ ಭೋಜನವೇ ಅವರಿಗೆ ಬಲೆಯೂ ಜಾಲವೂ ಆಗಲಿ ಯಾತನೆಯೂ ಪತನವೂ ಆಗಿ ಪರಿಣಮಿಸಲಿ.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು