ರೋಮಾಪುರದವರಿಗೆ 14:22 - ಕನ್ನಡ ಸತ್ಯವೇದವು C.L. Bible (BSI)22 ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ನದ್ರೆತ್ ತಿಯಾ ಕರಲ್ಲೊ ನಿರ್‍ದಾರ್ ತುಜ್ಯಾ ಜಿವನಾಚೊ ಉಜ್ವೊಡ್ ಹೊವ್ನ್ ರ್‍ಹಾಂವ್ದಿತ್. ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚ್ಯಾ ವಿರೊದ್ ಜಾಯ್ನಸ್ತಾನಾ ಹೆ ನಾಹೊಲ್ಯಾರ್ ತೆ ಕರುಕ್ ನಿರ್‍ದಾರ್ ಘೆತಲೊ ಮಾನುಸ್ ಸುಖಿ! ಅಧ್ಯಾಯವನ್ನು ನೋಡಿ |