Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:23 - ಕನ್ನಡ ಸತ್ಯವೇದವು C.L. Bible (BSI)

23 ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಸಂಶೆವ್ ಧರುನ್ ಘೆವ್ನ್ ಖಾತಲೊ ಚುಕೆತ್ ಪಡ್ತಾ; ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ತೊ ತೆ ಖಾತಾ, ಜೊ ಕೊನ್ ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ಎಕ್ ಕಾಮ್ ಕರ್‍ತಾ ಜಾಲ್ಯಾರ್ ತೊ ಪಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:23
6 ತಿಳಿವುಗಳ ಹೋಲಿಕೆ  

ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.


ಆದುದರಿಂದ ಅಧಿಕಾರವನ್ನು ವಿರೋಧಿಸುವವರು ದೇವರ ಆ ನೇಮಕವನ್ನೇ ವಿರೋಧಿಸುತ್ತಾರೆ. ಅಂಥವರು ಶಿಕ್ಷೆಗೆ ಗುರಿಯಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು