Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:4 - ಕನ್ನಡ ಸತ್ಯವೇದವು C.L. Bible (BSI)

4 ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಎಕ್ಲ್ಯಾಚ್ಯಾ ಸೆವಕಾಚಿ ನ್ಯಾಯ್ ನಿತ್ ಕರುಕ್ ತಿಯಾ ಕೊನ್? ತೊ ಇಬೆ ರ್‍ಹಾತಾ ಕಾಯ್ ಪಡ್ತಾ ಮನುನ್ ಬಗುನ್ ಘೆವ್ಕ್ ತೆಚೊ ಮಾಲಿಕ್ ಹಾಯ್. ತಿ ಆಳಾ ಜಿಕ್ತಾತುಚ್, ಕಶ್ಯಾಕ್ ಮಟ್ಲ್ಯಾರ್, ತೊ ಜಿಕಿ ಸರ್ಕೆ ಕರುಕ್ ತ್ಯಾ ಮಾಲ್ಕಾಕ್ ಬಳ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:4
19 ತಿಳಿವುಗಳ ಹೋಲಿಕೆ  

ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು