Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:5 - ಕನ್ನಡ ಸತ್ಯವೇದವು C.L. Bible (BSI)

5 ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಉಲ್ಲಿ ಲೊಕಾ ಹ್ಯಾ ದಿಸಾನಿಕಿ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತ್ಯಾತ್, ಅನಿ ಅನಿಎಕ್ಲೊ ಸಗ್ಳಿ ದಿಸಾಬಿ ಸಮಾ ಮನುನ್ ಚಿಂತುಕ್ ಫಿರೆ, ಹೆಚ್ಯಾ ವಿಶಯಾತ್ ಹರಿ ಎಕ್ಲ್ಯಾನಿ ಅಪ್ನಾಚ್ಯಾ ಮನಾಕ್ ಖಲೆ ಬರೆ ದಿಸ್ತಾ ತೊ ನಿರ್‍ದಾರ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:5
9 ತಿಳಿವುಗಳ ಹೋಲಿಕೆ  

ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು