ರೋಮಾಪುರದವರಿಗೆ 14:6 - ಕನ್ನಡ ಸತ್ಯವೇದವು C.L. Bible (BSI)6 ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜೆ ಕೊನ್ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತಾ, ತೊ ತೆ ಧನಿಯಾಚ್ಯಾ ಗೌರವಾಚ್ಯಾ ಸಾಟ್ನಿ ಕರ್‍ತಾ. ಜೆ ಕೊನ್ ಸಗ್ಳೆ ಖಾತಾ ತೆ ಧನಿಯಾಚ್ಯಾ ಗೌರವಾಸಾಟಿ ಮನುನ್ ಖಾತಾ. ಅನಿ ಅಪ್ನಾಕ್ ಗಾವಲ್ಲ್ಯಾ ಖಾನಾಸಾಟಿ ದೆವಾಕ್ ಧನ್ಯವಾದ್ ದಿತಾ. ಅನಿ ಜೊ ಕೊನ್ ಉಲ್ಲಿ ಜಿನಸಾ ಖಾಯ್ನಾ ತೊಬಿ ಧನಿಯಾಚ್ಯಾ ಗೌರವಾಸಾಟಿ ಖಾತಾ, ಅನಿ ತೊಬಿ ಅನಿ ಎಕ್ ರಿತಿನ್ ದೆವಾಕ್ ಧನ್ಯವಾದ್ ದಿತಾ. ಅಧ್ಯಾಯವನ್ನು ನೋಡಿ |