Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:1 - ಕನ್ನಡ ಸತ್ಯವೇದವು C.L. Bible (BSI)

1 ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ವಿಶ್ವಾಸಾತ್ ಘಟ್ ಹೊತ್ತೆ ಅಮಿ ವಿಶ್ವಾಸಾತ್ ತವ್ಡೆ ಲೈ ಘಟ್ ನಸಲ್ಲ್ಯಾಂಚ್ಯಾ ಚುಕಾಬಿ ಸಂಬಾಳುನ್ ಘೆವ್ನ್ ಜಾವ್ಚೆ. ಅಮಿ ಅಮ್ಚ್ಯಾಚ್ ಮನಾಕ್ ಬರೆ ದಿಸಿ ಸರ್ಕೆ ಕರುಂಗೆತ್ ರ್‍ಹಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:1
13 ತಿಳಿವುಗಳ ಹೋಲಿಕೆ  

ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.


ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.


ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು