Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:12 - ಕನ್ನಡ ಸತ್ಯವೇದವು C.L. Bible (BSI)

12 ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತೊಂದು ಸ್ಥಳದಲ್ಲಿ ಯೆಶಾಯನು ಹೇಳುವದೇನಂದರೆ - ಇಷಯನ ಅಂಕುರದವನು ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ; ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಪರ್ತುನ್, ಇಸಾಯಿಯಾ ಪ್ರವಾದಿ ಮನ್ತಾ; ಜೆಸ್ಸೆಚ್ಯಾ ಘರಾನ್ಯಾತ್ಲೊ ಎಕ್ಲೊ ದಿಸ್ತಾ “ತೊ ಸಗ್ಳ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ರಾಜ್ ಚಾಲ್ವುತಾ, ಅನಿ ತಿ ಲೊಕಾ ಅಪ್ನಾಚೊ, ಬರೊಸೊ ತೆಚೆ ವರ್‍ತಿ ಥವ್ತ್ಯಾತ್”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:12
24 ತಿಳಿವುಗಳ ಹೋಲಿಕೆ  

ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ನೆಮ್ಮುವರು ಅನ್ಯಜನರೆಲ್ಲರು ಇವನ ನಾಮವನು.”


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು