Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:13 - ಕನ್ನಡ ಸತ್ಯವೇದವು C.L. Bible (BSI)

13 ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವುಚ್ ಬರೊಶ್ಯಾಚೊ ಮುಳ್, ತುಮಿ ತೆಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ತುಮ್ಕಾ ತೊ ಪುರಾ ಸಂತೊಸಾನ್ ಅನಿ ಸಮಾದಾನಾನ್ ಭರುಂದಿತ್, ಅಶೆ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ತುಮ್ಚೊ ಬರೊಸೊ ವಾಡುನ್ಗೆತ್ ಜಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:13
21 ತಿಳಿವುಗಳ ಹೋಲಿಕೆ  

ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು