Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:16 - ಕನ್ನಡ ಸತ್ಯವೇದವು C.L. Bible (BSI)

16 ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾಸಾಟ್ನಿ, ಎಕ್ ಕ್ರಿಸ್ತಾ ಜೆಜುಚೊ ಸೆವಕ್ ಹೊತಲೊ ಅವಕಾಸ್, ಪವಿತ್ರ್ ಆತ್ಮ್ಯಾಚ್ಯಾ ವೈನಾ ದೆವಾಕ್ ಭೆಟ್ವುನ್ ದಿಲ್ಲೆ ದೆವಾನ್ ಸ್ವಿಕಾರ್ ಕರುಕ್ ಹೊತಾ ತಸ್ಲಿ ಕಾನಿಕ್ ಹಿ ಜುದೆವ್ ನ್ಹಯ್ ಅಸಲ್ಲಿ ಲೊಕಾ ಹೊವ್ಕ್ ಪಾಜೆ. ತೆಸೆ ಮನುನ್ ಮಿಯಾ ತೆಂಕಾ ಎಕ್ ಯಾಜಕಾಚ್ಯಾ ಸರ್ಕೆ ಹೊವ್ನ್ ದೆವಾಚಿ ಬರಿ ಖಬರ್ ಸಾಂಗುಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:16
40 ತಿಳಿವುಗಳ ಹೋಲಿಕೆ  

ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು