Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:29 - ಕನ್ನಡ ಸತ್ಯವೇದವು C.L. Bible (BSI)

29 ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ವರಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದದಿಂದ ತುಂಬಿದವನಾಗಿ ಬರುತ್ತೇನೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತುಮ್ಚ್ಯಾ ಮದ್ದಿ ಮಿಯಾ ಯೆತಾನಾ ಕ್ರಿಸ್ತಾಚಿ ಅಶಿರ್ವಾದಾ ಭರ್ಪುರ್ ಮಾಪಾನ್ ಘೆವ್ನ್ ಯೆತಾ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:29
11 ತಿಳಿವುಗಳ ಹೋಲಿಕೆ  

ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದ ನನ್ನ ಹಂಬಲವು ಈಗ ಕೈಗೂಡಲಿದೆ.


ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.


ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು