Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:30 - ಕನ್ನಡ ಸತ್ಯವೇದವು C.L. Bible (BSI)

30 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಾಜ್ಯಾ ಭಾವಾನೊ-ಭೆನಿಯಾನೊ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾ ಅನಿ ಪವಿತ್ರ್, ಆತ್ಮ್ಯಾನ್ ದಿಲ್ಲ್ಯಾ ಪ್ರೆಮಾಚ್ಯಾ ವಾಂಗ್ಡಾ ಕನ್ನಾಬಿ ಮಾಜೆಸಾಟಿ ತುಮ್ಚ್ಯಾ ಮಾಗ್ನಿಯಾತ್ನಿ ದೆವಾಕ್ಡೆ ಮಾಗುನ್ಗೆತ್ ರ್‍ಹಾವಾ ಮನುನ್ ತುಮ್ಚೆಕ್ಡೆ ವಿನಂತಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:30
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಸಹೋದರರೇ, ನಮಗಾಗಿಯೂ ಪ್ರಾರ್ಥಿಸಿರಿ.


ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು