Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:33 - ಕನ್ನಡ ಸತ್ಯವೇದವು C.L. Bible (BSI)

33 ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಶಾಂತಿಯನ್ನು ಕೊಡುವ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಶಾಂತಿಚೊ ದೆವ್ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:33
15 ತಿಳಿವುಗಳ ಹೋಲಿಕೆ  

ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು