Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪವಿತ್ರ್ ಪುಸ್ತಕಾತ್ ಲಿವಲ್ಲೆ ಸಗ್ಳೆ ಅಮ್ಕಾ ಶಿಕ್ವುಸಾಟ್ನಿ ಮನುನ್ ಲಿವಲ್ಲೆ ಹಾಯ್, ಪವಿತ್ರ್ ಪುಸ್ತಕಾನ್ ದಿಲ್ಲ್ಯಾ ಉಮ್ಮೆದಿ ವೈನಾ, ಸಂಬಾಳುನ್ ಜಾತಲೆ ಶಿಕ್ವಲ್ಲ್ಯಾ ವೈನಾ ಅಮಿ ಬರೊಸೊ ಥವ್ನ್ ರ್‍ಹಾವ್‍ಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:4
17 ತಿಳಿವುಗಳ ಹೋಲಿಕೆ  

ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II


ನಿನ್ನ ನುಡಿ ತರುತ್ತದೆನಗೆ ನವಚೇತನ I ಆಪತ್ಕಾಲದಲಿ ನನಗದೇ ಸಾಂತ್ವನ II


ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು