Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:8 - ಕನ್ನಡ ಸತ್ಯವೇದವು C.L. Bible (BSI)

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:8
29 ತಿಳಿವುಗಳ ಹೋಲಿಕೆ  

ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಅಂದರೆ, ನಿನ್ನ ಸ್ವಂತ ಮನಸ್ಸಾಕ್ಷಿಯ ಸಲುವಾಗಿ ಅಲ್ಲ, ನಿನಗೆ ತಿಳಿಸಿದವನ ಮನಸ್ಸಾಕ್ಷಿಯ ಸಲುವಾಗಿ ಊಟಮಾಡಬೇಡ. ನಿಮ್ಮಲ್ಲಿ ಒಬ್ಬನು, “ನನ್ನ ಸ್ಯಾತಂತ್ರ್ಯಕ್ಕೆ ಇನ್ನೊಬ್ಬನ ಮನಸ್ಸಾಕ್ಷಿ ಏಕೆ ಅಡ್ಡಿಯಾಗಬೇಕು?” ಎಂದು ಕೇಳಬಹುದು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?


ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.


ನನ್ನ ಬಾಯಿಂದ ಬರುತ್ತಿರುವುದು ಸತ್ಯ ನನ್ನ ತುಟಿಗೆ ದುಷ್ಟತನ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು