Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:18 - ಕನ್ನಡ ಸತ್ಯವೇದವು C.L. Bible (BSI)

18 ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸ್ಲಿ ಲೊಕಾ ಕ್ರಿಸ್ತಾ ಅಮ್ಚ್ಯಾ ಧನಿಯಾಚಿ ಸೆವಾ ಕರಿನ್ಯಾತ್, ಗೊಡ್-ಗೊಡ್ ಗೊಸ್ಟಿಯಾನಿ ಅನಿ ಪಶ್ವುತಲ್ಯಾ ಬೊಲ್ನ್ಯಾನಿ ತೆನಿ ವಿಶ್ವಾಸಾತ್ ಬಾರಿಕ್ ಹೊತ್ತ್ಯಾಂಚಿ ಮನಾ ಪಿಸ್ವುನ್ ಟಾಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:18
54 ತಿಳಿವುಗಳ ಹೋಲಿಕೆ  

ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?", ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು