Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:19 - ಕನ್ನಡ ಸತ್ಯವೇದವು C.L. Bible (BSI)

19 ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತುಮ್ಚ್ಯಾ ವಿಶ್ವಾಸ್ಪಾನಾಚಿ ಖಬರ್ ಸಗ್ಳ್ಯಾಕ್ಡೆ ಪಗಳಲ್ಲೆ ಆಯ್ಕುನ್ ಮಾಕಾ ಲೈ ಖುಶಿ ಹೊತಾ. ಬರೆ ಕರ್‍ತಲ್ಯಾತ್ ತುಮಿ ಬುದ್ವಂತ್ ಹೊತ್ಯಾಶಿ ಅನಿ ಬುರ್ಶ್ಯಾಪಾನಾಕ್ ತುಮಿ ಅವ್ಕಾಸುಚ್ ಕರುನ್ ದಿನ್ಯಾಶಿ ಮನುನ್ ಮಿಯಾ ವಿಶ್ವಾಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:19
19 ತಿಳಿವುಗಳ ಹೋಲಿಕೆ  

“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು