Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:2 - ಕನ್ನಡ ಸತ್ಯವೇದವು C.L. Bible (BSI)

2 ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಆಕೆಯನ್ನು ಕರ್ತನ ಶಿಷ್ಯಳೆಂದು ದೇವಜನರಿಗೆ ತಕ್ಕ ಹಾಗೆ ಸೇರಿಸಿಕೊಂಡು ಸಹಾಯವು ಯಾವ ವಿಷಯದಲ್ಲಿ ಬೇಕಾಗಿದ್ದರೂ ಸಹಾಯವನ್ನು ಮಾಡಿರಿ. ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚ್ಯಾ ಲೊಕಾನಿ ಕರುಕ್ ಪಾಜೆ ತಶೆ ತುಮಿ ತಿಕಾ ಧನಿಯಾಚ್ಯಾ ನಾವಾನ್ ಘೆವಾ ಅನಿ ತಿಕಾ ಗರಜ್ ಹೊತ್ತಿ ತವ್ಡಿ ಮಜತ್ ಕರಾ, ಸುಮಾರ್ ಲೊಕಾಕ್ನಿ ಅನಿ ಮಾಕಾಬಿ ತೆನಿ ಮಜತ್ ಕರ್‍ಲಿನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:2
25 ತಿಳಿವುಗಳ ಹೋಲಿಕೆ  

ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು.


ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.


ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು.


ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.


ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.


ನಿಮಗಾಗಿ ಬಹಳ ಶ್ರಮವಹಿಸಿದ ಮರಿಯಳಿಗೂ ನನ್ನ ನಮಸ್ಕಾರಗಳು.


ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ತಂಗಿಗೂ ಒಲುಂಪನಿಗೂ ಮತ್ತು ಇವರೊಂದಿಗೆ ಇರುವ ದೇವಜನರೆಲ್ಲರಿಗೂ ನನ್ನ ವಂದನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು