Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿಸಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಸಮಾದಾನಾಚೊ ಮುಳ್‍ ಹೊವ್ನ್ ಹೊತ್ತೊ ದೆವ್ ಲಗ್ಗುನಾಚ್ ಸೈತಾನಾಕ್ ತುಮ್ಚ್ಯಾ ಪಾಂಯಾಂಚ್ಯಾ ಬುಡಿ ಘಾಲುನ್ ಚಿರ್ಡುನ್ ಸೊಡ್ತಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ತುಮ್ಚ್ಯಾ ವಾಂಗ್ಡಾ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:20
26 ತಿಳಿವುಗಳ ಹೋಲಿಕೆ  

ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !


ನಮ್ಮ ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹ ನಿಮ್ಮಲ್ಲಿರಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರಲ್ಲಿರಲಿ.


ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು