Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:3 - ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆ ತಿಳಿಸಿರಿ. ಅವರು ಕ್ರಿಸ್ತ ಯೇಸುವಿನಲ್ಲಿ ನನ್ನೊಂದಿಗೆ ಸೇವೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ಕ್ರಿಸ್ತಾಚ್ಯಾ ಸೆವೆತ್ ಮಾಜೆ ವಾಂಗ್ಡಿ ಹೊವ್ನ್ ಹೊತ್ತ್ಯಾ ಪ್ರಿಸ್ಕಿಲ್ಲಾಕ್ ಅನಿ ಅಕ್ವಿಲಾಕ್ ಮಿಯಾ ಇಚಾರ್ಲಾ ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:3
17 ತಿಳಿವುಗಳ ಹೋಲಿಕೆ  

ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ನನ್ನ ಶುಭಾಶಯಗಳನ್ನು ತಿಳಿಸು.


ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.


ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.


ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.


ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.


ನನಗೆ ನೆರವಾಗಲು ನೀವು ಕಳುಹಿಸಿದ ಸಹೋದರ ಎಪಫ್ರೋದಿತನು ನಿಮ್ಮಲ್ಲಿಗೆ ಹಿಂದಿರುಗುವುದು ಅವಶ್ಯವೆಂದು ಭಾವಿಸುತ್ತೇನೆ. ಅವನು ನನ್ನೊಂದಿಗೆ ದುಡಿಯುತ್ತಾ, ಹೋರಾಡುತ್ತಾ ಬಂದಿದ್ದಾನೆ.


ಯುಸ್ತನೆನಿಸಿಕೊಳ್ಳುವ ಯೇಸು ಕೂಡ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ. ಕ್ರೈಸ್ತರಾದ ಯೆಹೂದ್ಯರಲ್ಲಿ ಇವರೇ ನನ್ನೊಡನೆ ದೇವರ ಸಾಮ್ರಾಜ್ಯದ ಏಳಿಗೆಗಾಗಿ ದುಡಿಯುತ್ತಿರುವವರು. ಇವರಿಂದ ನನಗೆ ತುಂಬಾ ಆದರಣೆ ದೊರಕಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು