Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಹೊತ್ತ್ಯಾ ಮಾಜ್ಯಾಚ್ ಕುಳಿಚ್ಯಾ ಅಂದ್ರೊನಿಕಾಕ್ ಅನಿ ಜುನಿಯಾಕ್ ಮಾಜೊ ನಮಸ್ಕಾರ್, ತೆಂಚಿ ನಾವಾ ಧರ್ಮದುತಾನಿಕ್ಡೆ ಸೈತ್ ಗೆಲ್ಲಿ ಅನಿ ತೆನಿ ಮಾಜೆನ್ಕಿ ಅದ್ದಿಚ್ ಕ್ರಿಸ್ತಾಂವ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:7
31 ತಿಳಿವುಗಳ ಹೋಲಿಕೆ  

ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ನನ್ನ ಸ್ವದೇಶೀಯರಾದ ಹೆರೋಡಿಯೊನನಿಗೂ ನಾರ್ಕಿಸ್ಸನ ಕುಟುಂಬದವರಲ್ಲಿ ಕ್ರೈಸ್ತರಾದವರಿಗೂ ನನ್ನ ವಂದನೆಗಳು.


“ಕ್ರಿಸ್ತಯೇಸುವಿಗೋಸ್ಕರ ನನ್ನ ಜೊತೆಯಲ್ಲಿ ಸೆರೆಮನೆಯಲ್ಲಿರುವ ಎಪಫ್ರನೂ ನನ್ನ ಸಹೋದ್ಯೋಗಿಗಳಾದ ಮಾರ್ಕ, ಅರಿಸ್ತಾರ್ಕ, ದೇಮ ಮತ್ತು ಲೂಕನು ನಿಮಗೆ ಶುಭಾಶಯಗಳನ್ನು ಕಳುಹಿಸುತ್ತಾರೆ.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ನಿಮಗಾಗಿ ಬಹಳ ಶ್ರಮವಹಿಸಿದ ಮರಿಯಳಿಗೂ ನನ್ನ ನಮಸ್ಕಾರಗಳು.


ಪ್ರಭುವಿನಲ್ಲಿ ನನ್ನ ಆಪ್ತಗೆಳೆಯನಾದ ಅಂಪ್ಲಿಯಾತನಿಗೆ ನನ್ನ ವಂದನೆಗಳು.


ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.


ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು