Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುದೆವ್ ನ್ಹಯ್ ಹೊತ್ತ್ಯಾಕ್ನಿ ಮೊಯ್ಜೆಚೆ ಖಾಯ್ದೆ ನಾತ್; ತೆನಿ ಪಾಪ್ ಕರ್‍ಲ್ಯಾನಿ ಅನಿ ಖಾಯ್ದ್ಯಾನಿತ್ನಾ ಚುಕ್ವುನ್ ಘೆಟ್ಲ್ಯಾನಿ. ಜುದೆವಾಕ್ನಿ ಖಾಯ್ದೆ ಹಾತ್; ತೆನಿ ಪಾಪ್ ಕರ್‍ಲ್ಯಾನಿ ಅನಿ ಖಾಯ್ದ್ಯಾ ಸರ್ಕೆ ತೆಂಚಿ ಝಡ್ತಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:12
23 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು