Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಅಶೆ, ಮಿಯಾ ಸಾಂಗಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಸಾರ್ಕೆ ತ್ಯಾ ದಿಸಿ ದೆವ್ ಜೆಜು ಕ್ರಿಸ್ತಾ ವೈನಾ ಸಗ್ಳ್ಯಾ ಲೊಕಾಂಚ್ಯಾ ಘುಟಾನಿ ಹೊತ್ತ್ಯಾ ಯವ್ಜನ್ಯಾಂಚಿ ಇಚಾರ್‍ನಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:16
31 ತಿಳಿವುಗಳ ಹೋಲಿಕೆ  

ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು