Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:17 - ಕನ್ನಡ ಸತ್ಯವೇದವು C.L. Bible (BSI)

17 “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರವನ್ನು ಆಧಾರವಾಗಿಟ್ಟುಕೊಂಡು ದೇವರಿಗೆ ಸೇರಿದವನೆಂದು ಕೊಚ್ಚಿಕೊಳ್ಳುತ್ತೀಯೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಯೆಹೂದ್ಯನೆನಿಸಿಕೊಂಡವನೂ ಧರ್ಮಶಾಸ್ತ್ರದಲ್ಲಿ ಭರವಸವಿಟ್ಟವನೂ ದೇವರ ವಿಷಯವಾಗಿ ಹೊಗಳಿಕೊಳ್ಳುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿಯಾ ತುಕಾಚ್ ಜುದೆವ್ ಮನುನ್ ಘೆತಲ್ಯಾ, ತಿಯಾ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ವರ್‍ತಿ ಠಿಕುನ್ ಹಾಸ್, ಅನಿ ತುಜ್ಯಾ ದೆವಾಚ್ಯಾ ವಿಶಯಾತ್ ತಿಯಾ ಮೊಟೆಪಾನ್ ಸಾಂಗ್ತೆಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:17
27 ತಿಳಿವುಗಳ ಹೋಲಿಕೆ  

ದೇವರಿಂದಲೇ ನಿಯಮಗಳನ್ನು ಪಡೆದಿರುವುದಾಗಿ ಕೊಚ್ಚಿಕೊಳ್ಳುವ ನೀನು ಆ ನಿಯಮಗಳನ್ನೇ ಉಲ್ಲಂಘಿಸಿ ದೇವರಿಗೆ ದ್ರೋಹಬಗೆಯುತ್ತೀಯೇನು?


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.


ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು.


ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.


ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.


ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು