Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:2 - ಕನ್ನಡ ಸತ್ಯವೇದವು C.L. Bible (BSI)

2 ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಸ್ಲೆ ಸಗ್ಳೆ ಕರ್‍ತಲ್ಯಾ ಲೊಕಾಂಚ್ಯಾ ವಿಶಯಾತ್ ದೆವ್ ದಿತಲೊ ನಿರ್ನಯ್ ಖರ್‍ಯಾಚ್ಯಾ ಪರ್‍ಕಾರ್ ರ್‍ಹಾತಾ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:2
27 ತಿಳಿವುಗಳ ಹೋಲಿಕೆ  

ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಆಗ ಜಲಾಧಿಕಾರಿಯಾದ ದೂತನು : “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು