Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:6 - ಕನ್ನಡ ಸತ್ಯವೇದವು C.L. Bible (BSI)

6 ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಪ್ರತಿಯೊಬ್ಬರಿಗೂ ಅವರವರು ಮಾಡಿದ ಕಾರ್ಯಗಳಿಗಾಗಿ ಬಹುಮಾನವನ್ನಾಗಲಿ ದಂಡನೆಯನ್ನಾಗಲಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವ್ ಹರಿಎಕ್ಲ್ಯಾಕ್ನಿ ತೆನಿ ಕರಲ್ಲ್ಯಾ ಕಾಮಾಂಚ್ಯಾ ಸರ್ಕೆಚ್ ಭೊಮಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:6
25 ತಿಳಿವುಗಳ ಹೋಲಿಕೆ  

ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.


ಅವರ ಮನಸ್ಸು ಯೋಚಿಸುವುದು ಹಿಂಸೆಯನ್ನು, ಅವರ ತುಟಿ ಪ್ರಸ್ತಾಪಿಸುವುದು ಹಾನಿಯನ್ನು.


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ಹೀಗಿರುವಲ್ಲಿ, ಅವನ ಸೇವಕರೂ ಸಹ ಸತ್ಯಸೇವಕರಂತೆ ವೇಷಧಾರಿಗಳಾದರೆ ಅದರಲ್ಲೇನು ಸೋಜಿಗ? ಅವರ ಕೃತ್ಯಗಳಂತೆಯೇ ಅವರ ಅಂತ್ಯವೂ ಇರುತ್ತದೆ.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವವನಿಗೆ ಸಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು