Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:7 - ಕನ್ನಡ ಸತ್ಯವೇದವು C.L. Bible (BSI)

7 ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲಿ ಲೊಕಾ ಬರೆ ಕರುನ್ಗೆತ್ ಅನಿ ಮಾನ್, ಮಹಿಮಾ, ಅನಿ ವಾಯ್ಟ್ ನಸಲ್ಲೆ ಜಿವನ್ ಕರುನ್ಗೆತ್ ಹಾತ್; ತೆಂಕಾ ದೆವ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:7
38 ತಿಳಿವುಗಳ ಹೋಲಿಕೆ  

ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.


ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು