Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:13 - ಕನ್ನಡ ಸತ್ಯವೇದವು C.L. Bible (BSI)

13 ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಅವರ ಗಂಟಲುಗಳು ತೆರೆದ ಸಮಾಧಿಗಳು. ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.” “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಂಚೆ ಗೊಸ್ಟಿಯಾ ಉಗ್ಡ್ಯಾ ಸಮಾದಿ ಸಾರ್ಕೆ ಹೊಲ್ಯಾತ್. ತೆಂಚ್ಯಾ ಜಿಬ್ಲಿಯಾ ವೈನಿ ಖಾಲಿ ಝುಟ್ಯಾ ಗೊಸ್ಟಿಯಾ ಖೆಳುನ್‍ಗೆತ್ ಹಾತ್. ತೆಂಚ್ಯಾ ಜಿಬ್ಲಿಚ್ಯಾ ಖಾಲ್ತಿ ಸಾಪಾಂಚ್ಯಾ ಸಾರ್ಕೆ ವಿಶ್ ಭರಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:13
17 ತಿಳಿವುಗಳ ಹೋಲಿಕೆ  

ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ.


ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು