Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:19 - ಕನ್ನಡ ಸತ್ಯವೇದವು C.L. Bible (BSI)

19 ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:19
24 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.


ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು.


ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?


ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು