Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:24 - ಕನ್ನಡ ಸತ್ಯವೇದವು C.L. Bible (BSI)

24 ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ ದೆವ್ ತೆಂಕಾ ಸೊಡ್ವುನ್ ಸ್ವತಂತ್ರ್ ಕರ್‍ತಲ್ಯಾ ಕ್ರಿಸ್ತಾ ಜೆಜುಚ್ಯಾ ವೈನಾ ಅಪ್ನಾಚ್ಯಾ ಕುರ್ಪೆಚ್ಯಾ ಫುಕೊಟ್ ದಿಲ್ಲ್ಯಾ ದೆನ್ಗಿ ವೈನಾ ತೆನಿ ಸಗ್ಳೆ ಜಾನಾ ನಿತಿವಂತ್ ಲೊಕಾ ಮನುನ್ ಠರ್‍ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:24
21 ತಿಳಿವುಗಳ ಹೋಲಿಕೆ  

ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ; ಅದು ಅವನ ಕಷ್ಟಾರ್ಜಿತ ಸಂಪಾದನೆ.


ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು