ರೋಮಾಪುರದವರಿಗೆ 3:27 - ಕನ್ನಡ ಸತ್ಯವೇದವು C.L. Bible (BSI)27 ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅಶೆ ರ್‍ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ. ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.