Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:4 - ಕನ್ನಡ ಸತ್ಯವೇದವು C.L. Bible (BSI)

4 ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕನ್ನಾಬಿ ನಾ! ಮಾನ್ಸಾ ಝುಟಿ ರ್‍ಹಾಲ್ಯಾರ್ ದೆವ್ ಖರೊಚ್ ರ್‍ಹಾವ್ಕ್ ಪಾಜೆ, ಪವಿತ್ರ್ ಪುಸ್ತಕ್ ಮನ್ತಾ, ತುಜ್ಯಾ ಬೊಲ್ನ್ಯಾ ವೈನಾಚ್ ತಿಯಾ ಭಕ್ತಿವಂತ್ ಮನುನ್ ದಿಸುನ್ ಯೆವ್ಕ್ ಪಾಜೆ; ತಿಯಾ ಖಟ್ಟಟಲ್ಲ್ಯಾ ತುಜ್ಯಾ ನ್ಯಾಯಾಚ್ಯಾ ಕಾಮಾತ್ ತಿಯಾ ಜಿಕುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:4
33 ತಿಳಿವುಗಳ ಹೋಲಿಕೆ  

ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಕ್ರಿಸ್ತಯೇಸುವಿನ ಮುಖಾಂತರ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಯತ್ನಿಸುತ್ತಿರುವ ನಾವು ಅನ್ಯಧರ್ಮೀಯರಂತೆ ಕಂಡುಬರುವುದಾದರೆ, ಕ್ರಿಸ್ತಯೇಸುವೇ ಪಾಪಕ್ಕೆ ಕಾರಣರೆಂದು ಹೇಳಿದಂತಾಗುತ್ತದೆ. ಆದರೆ ಅದೆಂದಿಗೂ ಆಗದು.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ಹಾಗಾದರೆ ಇಸ್ರಯೇಲರು ಮೇಲೇಳದಂತೆ ಮುಗ್ಗರಿಸಿಬಿದ್ದರು ಎಂದು ಹೇಳೋಣವೆ? ಎಂದಿಗೂ ಇಲ್ಲ. ಅವರ ಅಪರಾಧದ ನಿಮಿತ್ತ ಇತರರಿಗೆ ಉದ್ಧಾರ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆ ಪಡುವಂತಾಯಿತು.


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು