Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:6 - ಕನ್ನಡ ಸತ್ಯವೇದವು C.L. Bible (BSI)

6 ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ಅನ್ಯಾಯಸ್ಥನಾಗಿದ್ದರೆ ಲೋಕಕ್ಕೆ ಹೇಗೆ ನ್ಯಾಯತೀರಿಸಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎಂದಿಗೂ ಹಾಗೆ ಆಗದಿರಲಿ. ದೇವರು ಅನ್ಯಾಯಗಾರರಾಗಿದ್ದರೆ ಲೋಕಕ್ಕೆ ನ್ಯಾಯತೀರಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ನಾ ತಸೆ ನ್ಹಯ್ ಮನುನ್, ರ್‍ಹಾಲ್ಯಾರ್ ದೆವುಚ್ ಚುಕಿದಾರ್ ಮನುನ್ ರ್‍ಹಾಲ್ಯಾರ್ ಜಗಾಚಿ ಝಡ್ತಿ ತೆಚಾನ್ ಕಶಿ ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:6
13 ತಿಳಿವುಗಳ ಹೋಲಿಕೆ  

ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಜಗಕೆ ನ್ಯಾಯ ತೀರಿಸುವನು ನೀತಿಗನುಸಾರ I ಜನಾಂಗಕೆ ತೀರ್ಪು ಕೊಡುವನು ಸತ್ಯಕ್ಕನುಸಾರ II


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು