Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:13 - ಕನ್ನಡ ಸತ್ಯವೇದವು C.L. Bible (BSI)

13 ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಘರಾನ್ಯಾಕ್ನಿಚ್ಯಾ ಹ್ಯೊ ಸಗ್ಳೊ ಜಗ್ ತುಕಾ ಸಮಂದ್ ಪಡಲ್ಲೊ ಹಾಯ್ ಮನುನ್ ಗೊಸ್ಟ್ ದಿಲ್ಯಾನ್, ತನ್ನಾ ದೆವಾನ್ ಅಬ್ರಾಹಾಮಾನ್ ಖಾಯ್ದೆ ಪಾಳಲ್ಲ್ಯಾನ್ ಮನುನ್ ತಸೆ ಕರುಕ್ ನಾ; ತೆನಿ ವಿಶ್ವಾಸ್ ಕರ್‍ಲ್ಯಾನ್ ಅನಿ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಘೆಟಲ್ಲ್ಯಾನ್ ಮನುನ್ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:13
15 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’


ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.


ಆದರೆ ಲೇವಿಯ ಕುಲದವನಲ್ಲದ ಮೆಲ್ಕಿಸದೇಕನು ಅಬ್ರಹಾಮನಿಂದಲೇ ದಶಮಾಂಶವನ್ನು ಪಡೆದನು; ಮಾತ್ರವಲ್ಲದೆ, ದೇವರ ವಾಗ್ದಾನವನ್ನು ಪಡೆದ ಅಬ್ರಹಾಮನನ್ನೇ ಆಶೀರ್ವದಿಸಿದನು.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು